ಪತ್ರಕರ್ತ ನಾಗರಾಜ್.ವೈ ಗೆ ದತ್ತಿನಿಧಿ ಪ್ರಶಸ್ತಿ ಪ್ರದಾನ ಮಾಡಿದ ಸಚಿವ ಎನ್.ಚೆಲುವರಾಯಸ್ವಾಮಿ

ಕಾಸರಗೋಡು (ಕೆರಳ) ; ಇತ್ತಿಚೆಗೆ ಇಲ್ಲಿನ ಸೀತಾಂಗೋಳಿಯಲ್ಲಿ ಕಾಸರಗೋಡು ಜಿಲ್ಲಾ ಕನ್ನಡ ಮಾಧ್ಯಮ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿಪ್ರದೇಶಾಭಿವೃದ್ದಿ ಪ್ರಾಧಿಕಾ ಬೆಂಗಳೂರು, ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳುರು ಇವುಗಳ ಸಂಯುಕ್ತ ಆಶ್ರಯದಲ್ಲಿ ಅಲಯನ್ಸ್ ಕನ್ವೆನ್ಶನ್ ಸೆಂಟರ್ ನಲ್ಲಿ ನಡೆದ ನಾಲ್ಕನೇ ವರ್ಷದ ದತ್ತಿನಿಧಿ ಪ್ರಶಸ್ತಿ ಪ್ರದಾನ ಹಾಗೂ ಕನ್ನಡ ಸಂಸ್ಕøತಿ ಉತ್ಸವದಲ್ಲಿ ಕೊಪ್ಪಳ ಜಿಲ್ಲೆಯ ಟಿವಿ 5 ವರದಿಗಾರರಾದ ನಾಗರಾಜ್. ವೈ ಅವರಿಗೆ ಅನಿವಾಸಿ ಉದ್ಯಮಿ ಶ್ರೀ ಜೋಸೆಫ್ ಮಥಾಯಾಸ್ ದುಬೈ ನೀಡುವ ಪ್ರಶಸ್ತಿಯನ್ನು ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಅವರು ಪ್ರದಾನ ಮಾಡಿದರು. ಬಳಿಕ ಮಾತನಾಡಿದ ಸಚಿವರು, ಕಾಸರಗೋಡು ಜಿಲ್ಲೆ ಆಡಳಿತದ ದೃಷ್ಟಿಯಿಂದ ಕೇರಳ ರಾಜ್ಯಕ್ಕೆ ಒಳಪಟ್ಟರೂ ಸಹ ನಮ್ಮ ರಾಜ್ಯದ ಕನ್ನಡಿಗರ ಮನಸ್ಸು, ಹೃದಯದಲ್ಲಿ ಸ್ಥಾನ ಪಡೆದಿದೆ. ಈ ನಿಟ್ಟಿನಲ್ಲಿ ಕಾಸರಗೋಡಿನ ಕನ್ನಡಿಗರ ಹಾಗೂ ಕನ್ನಡ ಪತ್ರಕರ್ತರ ಕ್ಷೇಯೋಭಿವೃದ್ದಿಗೆ ಸದಾ ರಾಜ್ಯ ಸರ್ಕಾರ ಬದ್ಧವಾಗಿರುತ್ತದೆ‌ ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದರು. ಇದೇ ವೇಳೆ ಹಿರಿಯ ಪತ್ರಕರ್ತರಾದ ಗಣೇಶ್ ಕಾಸರಗೋಡು, ಮಂಡ್ಯದ ಮತ್ತಿಕೇರಿ ಜಯರಾಮ್, ಶಿವಮೊಗ್ಗದ ಎನ್.ರವಿಕುಮಾರ್, ಕೊಪ್ಪಳದ ನಾಗರಾಜ್. ವೈ, ಬೆಳಗಾಂನ ಮಲ್ಲಿಕಾರ್ಜುನ ರೆಡ್ಡಿ ಗೋಂದಿ, ಮಂಗಳೂರಿನ ವೇಣು ವಿನೋಧ, ಸತ್ಯವತಿ ಸೇರಿದಂತೆ ಒಟ್ಟು 21 ಜನ ಪತ್ರಕರ್ತರಿಗೆ, ಸಾಧಕರಿಗೆ ವಿವಿಧ ದತ್ತಿನಿಧಿ ಪ್ರಶಸ್ತಿಗಳನ್ನು ಕೃಷಿ ಸಚಿವರಾದ‌ ಎನ್.ಚೆಲುವರಾಯಸ್ವಾಮಿ ಪ್ರದಾನ ಮಾಡಿದರು. ಸಮಾರಂಭದ ಸಾನಿಧ್ಯವನ್ನು ಎಡನೀರು ಮಠದ ಸಚ್ಚಿದಾನಂದ ಭಾರತೀ ಸ್ವಾಮೀಜಿ ವಹಿಸಿದ್ದರು. ಸ್ವಾಗತ ಸಮಿತಿ ಅಧ್ಯಕ್ಷ ಕೆ.ಕೆ.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಉದ್ಯಮಿ ಸದಾಶಿವ ಶೆಟ್ಟಿ ಕುಳೂರು, ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಕರ್ನಾಟಕ ಗಡಿಪ್ರದೇಶಾಭಿವೃದ್ದಿ ಪ್ರಾಧಿಕಾರದ ಸದಸ್ಯರಾದ ಸಂಜೀವ ಕುಮಾರ್ ಅತಿವಾಳೆ, ಶಿವರೆಡ್ಡಿ ಖ್ಯಾಡೆದ್ ಗೌರವ ಉಪಸ್ಥಿತರಿದ್ದರು. ಧಾರ್ಮಿಕ ಮುಂದಾಳು ಅರಿಬೈಲು ಗೋಪಾಲ ಶೆಟ್ಟಿ, ಬ್ಲಾ.ಪಂ.ಸದಸ್ಯ ಸುಕುಮಾರ ಕುದ್ರೆಪ್ಪಾಡಿ, ಬದಿಯಡ್ಕ ಗ್ರಾ.ಪಂ.ಸದಸ್ಯ ಶಂಕರ ಡಿ., ಗಡಿನಾಡ ಸಾಹಿತ್ಯ-ಸಾಂಸ್ಕøತಿಕ ಅಕಾಡೆಮಿ ಅಧ್ಯಕ್ಷ ಎನ್.ಚನಿಯಪ್ಪ ನಾಯ್ಕ, ಟಿ.ಎಂ.ಶಹೀದ್, ಕಾರ್ತಿಕ್ ಶೆಟ್ಟಿ ಸೊಯ್ವಕಲ್ಲು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಬಳಿಕ ಏಕಪಾತ್ರಾಭಿನಯ, ಯಕ್ಷನೃತ್ಯ, ಕೈಕೊಟ್ಟು ನೃತ್ಯ, ತಿರುವಾದಿರ, ಶಾಸ್ತ್ರೀಯ ನೃತ್ಯ, ನಾಟ್ಯ ವೈಭವ ಮೊದಲಾದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.

Comments

Popular posts from this blog

ಶ್ರೀ ಚೈತನ್ಯ ಟೆಕ್ನೋ ಶಾಲೆಯ ವಿದ್ಯಾರ್ಥಿಗಳು ICSE ಫಲಿತಾಂಶದಲ್ಲಿ ಮಿಂಚಿದರು

17 ಏಪ್ರಿಲ್ 2025 ರಂದು ಗಂಗಾವತಿಯಲ್ಲಿ ನಡೆಯಲಿರುವ ಬೃಹತ್ ಉದ್ಯೋಗ ಮೇಳ

ಗಂಗಾವತಿಯಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮಡಿದವರ ಸ್ಮರಣೆಗೆ ಮೌನಾಚರಣೆ*